ಕರ್ನಾಟಕದಲ್ಲಿ ಜೂನ್ 2ರವರೆಗೂ ಮಳೆ ಮುಂದುವರೆಯಲಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಧಾರಾಕಾರ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕುಂದಾಪುರ, ಪಣಂಬೂರು, ಸಿದ್ದಾಪುರ, ನಾಪೋಕ್ಲು, ಕೊಟ್ಟಿಗೆಹಾರ, ಗೋಕರ್ಣ, ಕದ್ರಾ, ಮಂಗಳೂರು, ಕಾರ್ಕಳ, ಗೋಕರ್ಣದಲ್ಲಿ ಇನ್ನಷ್ಟು ಮಳೆಯಾಗಲಿದೆ.