October 9, 2026
Friday, October 9, 2026
spot_img

WEATHER | ಕರಾವಳಿ, ಮಲೆನಾಡಿನಲ್ಲಿ ವರುಣನ ಆರ್ಭಟ: ಸಮುದ್ರಕ್ಕಿಳಿಯುವ ಮುನ್ನ ಎಚ್ಚರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮುಂಗಾರು ಮಾರುತಗಳ ವೇಗ ಕೊಂಚ ತಗ್ಗಿದ್ದರೂ, ಹವಾಮಾನ ವೈಪರೀತ್ಯದಿಂದಾಗಿ ಹಲವು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಬೆಂಗಳೂರು ಐಎಂಡಿ (IMD) ನೀಡಿರುವ ವರದಿಯ ಪ್ರಕಾರ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ ಕೆಲವು ಕಡೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ದಟ್ಟವಾಗಿದೆ.

ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ. ಇಂದಿನಿಂದ (ಜುಲೈ 13) ಸಮುದ್ರ ತೀರದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ಇರುವುದರಿಂದ, ಮೀನುಗಾರರು ಹಾಗೂ ಕಡಲತೀರದ ನಿವಾಸಿಗಳು ಸಮುದ್ರಕ್ಕೆ ಇಳಿಯದಂತೆ ಜಾಗರೂಕತೆ ವಹಿಸಲು ಸೂಚಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ತುಂತುರು ಮಳೆ

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ತೀವ್ರತೆ ಹೆಚ್ಚಿರಲಿದೆ. ಮುಂಬರುವ ದಿನಗಳಲ್ಲೂ ಈ ಭಾಗದ ಹಲವು ಜಿಲ್ಲೆಗಳಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.

Must Read