WEATHER | ರಾಜ್ಯದ ಹಲವೆಡೆ ಮುಂದಿನ 2 ದಿನಗಳ ಕಾಲ ಗರಿಷ್ಠ ತಾಪಮಾನದಲ್ಲಿ ಭಾರೀ ಏರಿಕೆ

ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಬಿಸಿಲಿನ ತಾಪ ಏರಿಕೆಯಾಗಲಿದೆ. ಹಲವೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದ್ದು, ಇದೇ ವಾತಾವರಣ ಮುಂದುವರಿಯಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!