WEATHER | ಇಂದು ರಾಜ್ಯಾದ್ಯಂತ ಹೇಗಿರಲಿದೆ ವಾತಾವರಣ, ಇಲ್ಲಿದೆ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ ಬಿಸಿಲಿನ ಝಳ ಹೆಚ್ಚುತ್ತಿದ್ದು, ಜನರು ಹೈರಾಣಾಗಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಏರಿಕೆಯಾಗಿರುವುದು ಜನರನ್ನು ಆತಂಕಕ್ಕೆ ದೂಡಿದೆ.

ಬೇಸಿಗೆಯ ಬಿಸಿಲು ತೀವ್ರವಾಗಿ ಉರಿಯುತ್ತಿದೆ. ಇದೇ ವೇಳೆ ಉತ್ತರ ಭಾಗದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಾರ್ಚ್ ಮೊದಲ ವಾರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಆದರೆ, ಪ್ರಸ್ತುತ ವರದಿಯ ಪ್ರಕಾರ, ಅಂತಹ ಯಾವುದೇ ಹವಾಮಾನ ಮುನ್ಸೂಚನೆ ಇಲ್ಲ. ಆದರೆ, ಬಿಸಿಲಿನ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!