WEATHER | ಇಂದು ಯಾವ ಜಿಲ್ಲೆಗಳಲ್ಲಿ ಇರಲಿದೆ ಮಳೆಯ ಮುನ್ಸೂಚನೆ, ಇಲ್ಲಿದೆ ಮಾಹಿತಿ

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ, ಚಾಮರಾಜನಗರದ ದಕ್ಷಿಣ ಒಳನಾಡಿನಲ್ಲಿ ಲಘು ಮಳೆಯಾಗಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗದಲ್ಲಿ ಪ್ರತ್ಯೇಕ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!