ರಾಜ್ಯದಲ್ಲಿ ಚಳಿ ಆರಂಭವಾಗಿದ್ದು, ಮಳೆ ಸ್ವಲ್ಪ ಮಟ್ಟಿಗೆ ಕೈಕೊಟ್ಟಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಬೆಳಗ್ಗೆ ಮತ್ತು ಸಂಜೆ ಚಳಿ ಇರುತ್ತದೆ. ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚಿಸುತ್ತಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.