ಹವಾಮಾನ ಇಲಾಖೆ ಪ್ರಕಾರ ಇಂದು ಮತ್ತು ನಾಳೆ ರಾಜ್ಯದ ಹಲವೆಡೆ ಒಣ ಹವಾಮಾನದ ಅನುಭವವಾಗುವ ಸಾಧ್ಯತೆ ಇದೆ.
ಶುಕ್ರವಾರದಿಂದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.