ರಾಜ್ಯದ ಹಲವೆಡೆ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಚಳಿ ಮುಂದುವರಿಯಲಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ.
ಚಿಕ್ಕಮಗಳೂರು, ಹಾಸನ, ಮಂಡ್ಯ-ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ದಕ್ಷಿಣ ಒಳನಾಡಿನ ಗ್ರಾಮಾಂತರ ಪ್ರದೇಶಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.