October 9, 2026
Friday, October 9, 2026
spot_img

WEATHER | ವಾಯುಭಾರ ಕುಸಿತದ ಎಫೆಕ್ಟ್: ಸೆ.18ರಿಂದ ರಾಜ್ಯದಲ್ಲಿ ವರುಣನ ಅಬ್ಬರ ಹೆಚ್ಚಾಗೋ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹವಾಮಾನದ ಮೇಲೂ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ವ್ಯಾಪ್ತಿ ಹಾಗೂ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಅಬ್ಬರ ಮತ್ತೆ ಚುರುಕಾಗುವ ಸಾಧ್ಯತೆಯಿದೆ. ಸದ್ಯ ಹಲವೆಡೆ ಬಿಸಿಲು ಮುಂದುವರಿದಿದ್ದರೂ, ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ.

ಎಲ್ಲೆಲ್ಲಿ ಮಳೆ ಸಾಧ್ಯತೆ ಇದೆ?

ದಕ್ಷಿಣ ಕನ್ನಡದ ಸುಳ್ಯ ಸುತ್ತಮುತ್ತ ಸಂಜೆ ಅಥವಾ ರಾತ್ರಿ ವೇಳೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.ಮಲೆನಾಡಿನ ಕೊಡಗು ಜಿಲ್ಲೆಯ ಕರಾವಳಿಗೆ ಹೊಂದಿಕೊಂಡ ಪ್ರದೇಶಗಳು ಹಾಗೂ ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು ಸುತ್ತಮುತ್ತ ಸಂಜೆ ಮತ್ತು ರಾತ್ರಿ ವೇಳೆ ಮಳೆಯಾಗಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.

ಶ್ರೀಲಂಕಾ ಕರಾವಳಿಯಲ್ಲಿ ಸದ್ಯ ಇರುವ ವಾಯುಭಾರ ಕುಸಿತ ಹಾಗೂ ಸೆಪ್ಟೆಂಬರ್ 18ರಂದು ಅಂಡಮಾನ್ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ರೂಪುಗೊಳ್ಳುವ ತೀವ್ರತೆಯ ಮೇಲೆ ರಾಜ್ಯದ ಮಳೆಯ ಪ್ರಮಾಣ ನಿರ್ಧಾರವಾಗಲಿದೆ.

Must Read