ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಪ್ರದೇಶಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಂತಹ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾದ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.