ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಹಲವೆಡೆ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿ ಸಾಧಾರಣ ಮಳೆಯಾಗಿದೆ.
ಮುಂದಿನ ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮೊದಲ ಮೂರು ದಿನಗಳು, ಅಂದರೆ. ಜೂ. 17, 18 ಮತ್ತು 19 ರಂದು ಕರಾವಳಿಯ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.