August 15, 2026
Saturday, August 15, 2026
spot_img

WEATHER | ಬಿಸಿಲಿನ ಹೊಡೆತಕ್ಕೆ ಬೆಂದ ಕರ್ನಾಟಕ: ಉತ್ತರ ಒಳನಾಡಿನಲ್ಲಿ ಡ್ರೈ ವೆದರ್, ಎಲ್ಲೆಲ್ಲಿ ಮಳೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ತಣ್ಣಗಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಬೇಸಿಗೆಯಂತಹ ಬಿಸಿ ವಾತಾವರಣ ನಿರ್ಮಾಣವಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ವರದಿಯ ಪ್ರಕಾರ, ಇಂದು ಕೂಡ ರಾಜ್ಯದ ಬಹುಪಾಲು ಪ್ರದೇಶಗಳಲ್ಲಿ ತಾಪಮಾನ ಏರಿಕೆಯಾಗಲಿದ್ದು, ಒಣಹವೆ ಮುಂದುವರಿಯಲಿದೆ.

ಉತ್ತರ ಒಳನಾಡಿನಲ್ಲಿ ಹೇಗಿರಲಿದೆ ವೆದರ್?

ವಿಶೇಷವಾಗಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದ್ದು, ಒಣ ಹವಾಮಾನವೇ ಮೇಲುಗೈ ಸಾಧಿಸಲಿದೆ. ಆದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸ್ಥಳೀಯ ವಾತಾವರಣದ ಏರುಪೇರಿನಿಂದಾಗಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಬೆಂಗಳೂರು ಮತ್ತು ಮಡಿಕೇರಿ ತಾಪಮಾನ ವಿವರ

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗುವ ಸಾಧ್ಯತೆಯಿದೆ. ಇನ್ನು ಪ್ರವಾಸಿಗರ ನೆಚ್ಚಿನ ತಾಣವಾದ ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಮಲೆನಾಡಿನ ಭಾಗದಲ್ಲಿ ತುಸು ತಂಪಾದ ವಾತಾವರಣ ಇರಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !