ದಕ್ಷಿಣ ಕನ್ನಡ ಮತ್ತು ಉಡುಪಿಯಂತಹ ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.