ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ತುಂತುರು ಮಳೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆಯಾಗಿದ್ದು, ದಕ್ಷಿಣ ಒಳನಾಡು, ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.