September 26, 2026
Saturday, September 26, 2026
spot_img

WEATHER | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಈ ಭಾಗಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದಾಗಿ ಇಡೀ ರಾಜ್ಯಾದ್ಯಂತ ತಂಪಾದ ವಾತಾವರಣ ನಿರ್ಮಾಣವಾಗಿದ್ದು, ಗರಿಷ್ಠ ತಾಪಮಾನದಲ್ಲೂ ಇಳಿಕೆ ಕಂಡುಬಂದಿದೆ. ಇದರ ಪ್ರಭಾವದಿಂದಾಗಿ ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಭಾರತೀಯ ಹವಾಮಾನ ಇಲಾಖೆಯು ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಬರ?

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಪ್ರಮುಖ ಪ್ರವಾಸಿ ತಾಣಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಉತ್ತಮ ಮಳೆಯಾಗಲಿದೆ. ನಾಳೆಯೂ ಸಹ ಇದೇ ರೀತಿಯ ಮಳೆ ಮಿಶ್ರಿತ ಹವಾಮಾನ ಮುಂದುವರಿಯಲಿದ್ದು, ಸದ್ಯಕ್ಕೆ ವಾತಾವರಣ ತಂಪಾಗಿರಲಿದೆ.

ಉತ್ತರ-ದಕ್ಷಿಣ ಒಳನಾಡಿನ ಸ್ಥಿತಿ ಏನು?

ರಾಜ್ಯದ ಒಳನಾಡಿನ ಭಾಗಗಳಲ್ಲೂ ವರುಣ ದೇವನ ಕೃಪೆ ಇದ್ದು, ಮುಖ್ಯವಾಗಿ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರವಾದ ಮಳೆ ಸುರಿಯುವ ಸಾಧ್ಯತೆಯಿದೆ. ಇತ್ತ ದಕ್ಷಿಣ ಒಳನಾಡಿನ ಮಲೆನಾಡು ಗಡಿಭಾಗದ ಜಿಲ್ಲೆಗಳಲ್ಲಿ ಇಡೀ ದಿನ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Must Read