ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕಳೆದ ಎರಡು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಇಂದು ಕೂಡ ಮಳೆ ಬೀಳಬಹುದು. ಜತೆಗೆ, ಬೆಳಗ್ಗೆ ಮತ್ತು ಸಂಜೆ ಚಳಿ ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮಡಿಕೇರಿ ಸೇರಿದಂತೆ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.