ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡಿನ ಮತ್ತು ಕರಾವಳಿ ಪ್ರದೇಶಗಳಲ್ಲಿ ನವೆಂಬರ್ 29 ರಿಂದ ಡಿಸೆಂಬರ್ 3 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೋಲಾರ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಲಘು ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸಂಜೆ ವೇಳೆ ಗಾಳಿಯ ವೇಗ ಗಂಟೆಗೆ 60-70 ಕಿ.ಮೀ. ಇರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.