ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ದಕ್ಷಿಣ ಭಾಗದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.