ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಇದೇ ವೇಳೆ ರಾಜ್ಯದ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಹಾಸನ, ಕೊಡಗು, ರಾಮನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.