WEATHER | ಗರಿಷ್ಠ ತಾಪಮಾನದಲ್ಲಿಏರಿಕೆ: ಸೆಕೆಯ ವಾತಾವರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ ಬದಲಾಗಲಿದ್ದು, ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ರಾಜ್ಯ ಹವಾಮಾನ ಇಲಾಖೆಯು ತನ್ನ ಹವಾಮಾನ ಮುನ್ಸೂಚನೆಯಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನ ಪ್ರದೇಶಗಳಿಗೆ ನೇರ ಹೊಡೆತ ಬೀಳಲಿದೆ ಎಂದು ಹೇಳಿದೆ.

ಉತ್ತರ ಒಳನಾಡಿನಲ್ಲಿ ಈಗಾಗಲೇ ಬೇಸಿಗೆಯ ಬಿಸಿ ಹೆಚ್ಚಿದ್ದು, ಜನ ಕಂಗಾಲಾಗಿದ್ದಾರೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡವೂ ಇದಕ್ಕೆ ಹೊರತಾಗಿಲ್ಲ. ಇಲ್ಲಿ ಬಿಸಿಲು ಕೂಡ ಹೆಚ್ಚು. ಕನಿಷ್ಠ ಮತ್ತು ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!