ಮುಂದಿನ ಎರಡು ದಿನಗಳ ಕಾಲ ಕರ್ನಾಟಕದಾದ್ಯಂತ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಕಂಡುಬರುವುದಿಲ್ಲ, ಎರಡು ದಿನಗಳ ಬಳಿಕ ಗರಿಷ್ಠ ಉಷ್ಣಾಂಶದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಧಾರವಾಡ, ಕಲಬುರಗಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿದೆ.
ಕನಿಷ್ಠ ತಾಪಮಾನವು ಕರಾವಳಿಯಲ್ಲಿ 23-24 ಡಿಗ್ರಿ ಸೆಲ್ಸಿಯಸ್ನಷ್ಟಿದೆ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ ಮತ್ತು ಗದಗದಲ್ಲಿ 15-17 ಡಿಗ್ರಿ ಸೆಲ್ಸಿಯಸ್, ಬೆಂಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ಮಡಿಕೇರಿ, ಮೈಸೂರಿನಲ್ಲಿ 17-19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.