ಮುಂದಿನ ಮೂರು ದಿನಗಳಲ್ಲಿ ರಾಜ್ಯದಲ್ಲಿ ಚದುರಿದ ಮಳೆಯೊಂದಿಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.