ಕರ್ನಾಟಕದ ಕರಾವಳಿಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಯಚೂರು, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಭಾಗದಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.