August 28, 2026
Friday, August 28, 2026
spot_img

WEATHER | ಕರಾವಳಿ-ಮಲೆನಾಡಿನಲ್ಲಿ ಇರಲಿದೆ ಮುಂಗಾರಿನ ತಂಪು: ಇನ್ನೆರಡು ದಿನ ಸಾಧಾರಣ ವರ್ಷಧಾರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಕೊಂಚ ಕ್ಷೀಣಿಸಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಆರ್ಭಟ ತಗ್ಗಿರುವುದರಿಂದ ಕರಾವಳಿ ಭಾಗದ ಜನಜೀವನ ಸುಗಮವಾಗಿ ಸಾಗಲಿದ್ದು, ಆಹ್ಲಾದಕರ ವಾತಾವರಣ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ತಂಪಾದ ಗಾಳಿ ಬೀಸಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಇನ್ನು ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ರಾಮನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ತಂಪಾದ ವಾತಾವರಣದೊಂದಿಗೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !