ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳಭಾಗ ಮತ್ತು ಗುಡ್ಡಗಾಡು ಪ್ರದೇಶಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿಯಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಲಘು ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆ ಇದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರದ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಂತಹ ಪ್ರತ್ಯೇಕ ಪ್ರದೇಶಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ.