ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದ್ದು, ರಾಜ್ಯದ ಹಲವೆಡೆ ಈಗಾಗಲೇ ಮಳೆಯಾಗುತ್ತಿದೆ.
ದಕ್ಷಿಣ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೀದರ್ ಜಿಲ್ಲೆಯಲ್ಲಿ 30 ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.