ಜೂನ್ 6 ರಂದು ರಾಜ್ಯದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ ಎಂದು ವರದಿಯಾಗಿದೆ.
ಜೂನ್ 5 ರಿಂದ 13 ರವರೆಗೆ ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಜೂನ್ 6 ರಿಂದ 11 ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.