ರಾಜ್ಯದ ಕೆಲವು ಭಾಗಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 7ರವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.