Friday, January 9, 2026

WEATHER | ರಾಜ್ಯದಲ್ಲಿ ಇಂದು ಮಳೆಯಿಲ್ಲ: ಒಳನಾಡು–ಕರಾವಳಿಯಲ್ಲಿ ಒಣಹವೆ, ಬೆಂಗಳೂರಲ್ಲಿ ಮಂಜು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಕೆಲ ದಿನಗಳಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ತುಂತುರು ಮಳೆಯ ವಾತಾವರಣ ಕಂಡುಬಂದಿದ್ದರೂ, ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇಂದು ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮಳೆಯಿಲ್ಲದೆ ಒಣಹವೆ ಮುಂದುವರಿಯಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಂಜು ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್‌ ಹಾಗೂ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

error: Content is protected !!