September 30, 2026
Wednesday, September 30, 2026
spot_img

WEATHER | ಮಳೆಯ ಸುಳಿವೇ ಇಲ್ಲ: ಕರುನಾಡಿನಾದ್ಯಂತ ಶುಷ್ಕ ವಾತಾವರಣ, ಮೈಕೊರೆಯುವ ಚಳಿ!

ರಾಜ್ಯದ ಜನತೆಗೆ ಸದ್ಯಕ್ಕಂತೂ ಚಳಿಯಿಂದ ಮುಕ್ತಿ ಸಿಗುವ ಲಕ್ಷಣ ಕಾಣುತ್ತಿಲ್ಲ. ಕಳೆದ ಕೆಲವು ದಿನಗಳಿಂದ ಕಾಡುತ್ತಿರುವ ಶುಷ್ಕ ವಾತಾವರಣ ಮತ್ತು ಮೈಕೊರೆಯುವ ಚಳಿ ಇಂದೂ ಕೂಡ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಬೀದರ್, ವಿಜಯಪುರ ಸೇರಿದಂತೆ ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಚಳಿ ಹಾಗೂ ಒಣಹವೆ ಇರಲಿದೆ. ಧಾರವಾಡ, ಗದಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಿರಲಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಶುಷ್ಕ ಗಾಳಿಯ ಪ್ರಭಾವ ಇರಲಿದೆ.

ಮೈಸೂರು, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ದಕ್ಷಿಣದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಆವರಿಸಿರಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆ ಮತ್ತು ತಡರಾತ್ರಿ ಚಳಿಯ ಅಬ್ಬರ ಹೆಚ್ಚಾಗಿರುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು. ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಬೆಚ್ಚಗಿನ ಉಡುಪುಗಳನ್ನು ಧರಿಸಬೇಕು ಹಾಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

Must Read