Wednesday, June 7, 2023

Latest Posts

ಮೂರು ದಿನಗಳ ಕಾಲ ದೇಶದ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆ: ಐಎಂಡಿ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೂರು ದಿನಗಳ ಕಾಲ ದೇಶದ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಕೇರಳ, ದಕ್ಷಿಣ ಕರ್ನಾಟಕ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಮೇ 3ರವರೆಗೆ ಭಾರೀ ಮಳೆ ಮತ್ತು ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ತಾಪಮಾನದ ಮಟ್ಟ ಕಡಿಮೆಯಾಗಿದೆ ಮತ್ತು ಮುಂದಿನ ನಾಲ್ಕು ದಿನಗಳಲ್ಲಿ ಎಲ್ಲಿಯೂ ಬಿಸಿಗಾಳಿ ಸ್ಥಿತಿಗೆ ಅವಕಾಶವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹವಾಮಾನ ಇಲಾಖೆ ಪ್ರಕಾರ ಮತ್ತೆ ಮೇ 5 ರಿಂದ ಮೂರು ದಿನಗಳ ಕಾಲ ದೇಶದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ, ಮಳೆ ಕ್ರಮೇಣ ಕಡಿಮೆಯಾಗಲಿದೆ.

ದೇಶದ ಬಹುತೇಕ ಭಾಗಗಳಲ್ಲಿ ಮೇ 3ರವರೆಗೆ ಗುಡುಗು ಸಹಿತ ಮಳೆ ಮುಂದುವರಿಯಲಿದೆ. ಮೇ 4 ರಿಂದ ಇದು ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ. ಈ ಮಳೆಯಿಂದ ವಾಯುವ್ಯ ಭಾರತದ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ಐಎಂಡಿ ವಿಜ್ಞಾನಿ ನರೇಶ್ ಕುಮಾರ್ ಹೇಳಿದ್ದಾರೆ. 67 ರಷ್ಟು ಸಾಮಾನ್ಯದಿಂದ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಹಲವೆಡೆ ಮುಂಗಾರು ಪೂರ್ವ ಮಳೆ, ಗುಡುಗು, ಆಲಿಕಲ್ಲು, ಸಿಡಿಲು ಸಹಿತ ಮಳೆಗೆ ಬೆಳೆ ಹಾನಿಯಾಗಿದೆ. ಹವಾಮಾನ ಬದಲಾವಣೆಯು ಜಾಗತಿಕ ತಾಪಮಾನವನ್ನು ಹೆಚ್ಚಿಸುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!