ಮೈಸೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇತರ ಪ್ರದೇಶಗಳಲ್ಲಿ ಶುಷ್ಕ ಹವಾಮಾನವನ್ನು ನಿರೀಕ್ಷಿಸಲಾಗಿದೆ. ಆದಾಗ್ಯೂ, ಬೆಳಗಾವಿ, ಕಲಬುರಗಿ ಮತ್ತು ಬೀದರ್‌ನ ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದೆಡೆ ಲಘು ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಹೆಚ್ಚಾಗಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಕೆಲವೊಮ್ಮೆ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ. ಇರಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ ವೇಗದಲ್ಲಿ ಭಾರಿ ಮಳೆಯಾಗಲಿದೆ. ಈ ನಿಟ್ಟಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಉಡುಪಿ, ಬೀದರ್, ಕಲಬುರಗಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.