WEATHER | ರಾಜ್ಯದ ಹಲವೆಡೆ ಭಯಂಕರ ಮಳೆ ಸಾಧ್ಯತೆ, ಆರೆಂಜ್‌ ಅಲರ್ಟ್‌ ಘೋಷಣೆ

ಕರ್ನಾಟಕದ ಕರಾವಳಿ ಭಾಗಗಳಲ್ಲಿ ನಿರಂತರ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನಲ್ಲಿ ಅಲ್ಲಲ್ಲಿ ಮಳೆಯಾಗಲಿದ್ದು, ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!