March 16, 2026
Monday, March 16, 2026
spot_img

WEATHER | ಬಿಸಿಲ ನಾಡಿಗೆ ಮಳೆಯ ತಂಪು: ಕರಾವಳಿ, ಮೈಸೂರು ಭಾಗದಲ್ಲಿ ಇಂದು ವರುಣನ ಸಿಂಚನ

ಕಳೆದ ಕೆಲವು ದಿನಗಳಿಂದ ಸುಡುತ್ತಿರುವ ಬಿಸಿಲು ಮತ್ತು ಒಣ ಹವೆಯಿಂದ ಕಂಗೆಟ್ಟಿದ್ದ ಜನತೆಗೆ ಹವಾಮಾನ ಇಲಾಖೆಯು ತುಸು ಸಮಾಧಾನದ ಸುದ್ದಿ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ವರುಣನ ಸಿಂಚನವಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೊಡಗು, ಮೈಸೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ.

ಮಳೆಯ ಮುನ್ಸೂಚನೆ ಕೆಲವೇ ಜಿಲ್ಲೆಗಳಿಗೆ ಸೀಮಿತವಾಗಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಮಂಡ್ಯ, ರಾಮನಗರ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲ ಧಗೆ ಇರಲಿದೆ.

ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಂತೆ ಇಂದೂ ಕೂಡ ಒಣ ಹವೆ ಇರಲಿದ್ದು, ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !