May 2, 2026
Saturday, May 2, 2026
spot_img

WEATHER | ಸೂರ್ಯನ ಸುಡು ಬಿಸಿಲಿಗೆ ಮಳೆ ತಂಪು: ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಶುರುವಾದ ಗುಡುಗು-ಮಿಂಚಿನ ಆಟ ಇನ್ನೂ ಮುಗಿದಿಲ್ಲ. ಇಂದೂ ಕೂಡ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಮಂದಿ ಸ್ವಲ್ಪ ಎಚ್ಚರದಿಂದಿರಬೇಕು.

ಕಲಬುರ್ಗಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.

ಬೀದರ್, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಿದ್ದು, ಜಾಗರೂಕರಾಗಿರಲು ಸೂಚಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಶಿವಮೊಗ್ಗ, ಕೊಡಗು, ಹಾಸನ ಭಾಗಗಳಲ್ಲೂ ಗುಡುಗು ಸಹಿತ ಮಳೆಯ ಸಿಂಚನವಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲೂ ಮಳೆ ಸುರಿಯುವ ಸಂಭವವಿದ್ದು, ಉಳಿದ ಕೆಲವು ಜಿಲ್ಲೆಗಳಲ್ಲಿ ಬಿಸಿಲ ಧಗೆ ಹಾಗೆಯೇ ಮುಂದುವರಿಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !