April 7, 2026
Tuesday, April 7, 2026
spot_img

WEATHER | ಇಂದು ಕೆಲವು ಕಡೆ ಮಾತ್ರ ಮಳೆಯಾಗುತ್ತಂತೆ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮಳೆರಾಯನ ಅಬ್ಬರ ಕಂಡುಬಂದಿದ್ದರೂ, ಇಂದು ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿವೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ವಿಶೇಷವಾಗಿ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಭಾಗಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದು ಗಾಳಿ-ಮಳೆಯ ವಾತಾವರಣ ನಿರ್ಮಾಣವಾಗಬಹುದು.

ಇದನ್ನೂ ಓದಿ:

ಇನ್ನೊಂದೆಡೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದು, ಬಿಸಿಲು ಮತ್ತು ಶುಷ್ಕ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

ಹವಾಮಾನ ತಜ್ಞರ ಪ್ರಕಾರ, ಮಳೆ ಕಡಿಮೆಯಾದ ಬಳಿಕ ಮುಂದಿನ ಕೆಲ ದಿನಗಳಲ್ಲಿ ತಾಪಮಾನ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಕರ್ನಾಟಕದಲ್ಲಿ ದಿನದ ಹೊತ್ತಿನಲ್ಲಿ ಬಿಸಿಲಿನ ತಾಪ ಹೆಚ್ಚು ಅನುಭವವಾಗಬಹುದು

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !