ಬೆಂಗಳೂರಿನಲ್ಲಿ ಇಂದು ಮಳೆ ಬರುವ ಸಾಧ್ಯತೆ ಕಡಿಮೆ ಇದ್ದು, ಬಂದರೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮೇ 25ರಿಂದ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಕುಮಟಾ, ಮಂಗಳೂರು, ಮುಂಡಗೋಡು, ಕದ್ರಾ, ಮುಲ್ಕಿ, ಕಾರವಾರ, ಜೋಯ್ಡಾ, ಬೆಳ್ತಂಗಡಿ, ಕಲಘಟಗಿಯಲ್ಲಿ ಭಾರಿ ಮಳೆಯಾಗಿದೆ.