WEATHER | ಕರ್ನಾಟಕದಲ್ಲಿ ಮಳೆ ಮುನ್ಸೂಚನೆ, ಡಿ.14ರವರೆಗೂ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ವಿವಿಧೆಡೆ ಮತ್ತೆ ಮಳೆ ಆರಂಭವಾಗಿದೆ. ಕಳೆದ ವಾರ ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಿತ್ತು. ಇದೀಗ ಹಿಂದೂ ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತದ ಪರಿಚಲನೆ ಉಂಟಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಡಿಸೆಂಬರ್ 14 ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!