WEATHER | ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಮುಂದಿನ ವಾರ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 39.2ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 13.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!