ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು, ಬೆಳಗಾವಿ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ಬಿಸಿಲು ಮುಂದುವರಿಯಲಿದೆ. ಸಂಜೆ ಮಳೆಯಾಗಲಿದ್ದು, ಮಧ್ಯಾಹ್ನ ಬಿಸಿಲು ವಾತಾವರಣ ಇರಲಿದೆ.