ವಾರವಿಡೀ ರಾಜ್ಯದ ಹಲವೆಡೆ ಮಳೆಯಾಗಿದೆ. ಇಂದು ಕೂಡ ಮಳೆ ಮುಂದುವರೆಯಲಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಭಾಗಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ.
ಅ. 9ರಂದು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.