WEATHER | ರಾಜ್ಯದಲ್ಲಿ 5 ದಿನಗಳ ಕಾಲ ಮಳೆ ನಿರೀಕ್ಷೆ, ಇನ್ನು ಕೆಲವು ಕಡೆ ಹೀಟ್‌ ವೇವ್‌ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ ಐದು ದಿನಗಳಲ್ಲಿ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಬೆಂಗಳೂರು ಮಾತ್ರ ಬಿಸಿಲಿನ ಪ್ರಭಾವ ಹೆಚ್ಚಲಿದೆ. ಏಕೆಂದರೆ ಏಪ್ರಿಲ್ 2ರ ವೇಳೆಗೆ ಗರಿಷ್ಠ ತಾಪಮಾನ 36-37 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.

ರಾಜ್ಯದ ಹಲವು ನದಿಗಳಲ್ಲಿ ನೀರು ಬತ್ತಿ ಹೋಗುತ್ತಿರುವ ದೃಶ್ಯಗಳನ್ನು ನೋಡುತ್ತಿರಬಹುದು, ಊಹಿಸಲೂ ಸಾಧ್ಯವಾಗದ ಭೀಕರತೆಗೆ ಸಾಕ್ಷಿಯಾಗಿದೆ. ಹಾಗಾಗಿ ಕಾವೇರಿ ನದಿ ಸೇರಿದಂತೆ ನದಿಯ ಒಡಲು ಇರುವ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಅಲ್ಲದೆ, ಕರ್ನಾಟಕದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 2-3 ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!