ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಗರಿಷ್ಠ ತಾಪಮಾನ ಕರಾವಳಿಯಲ್ಲಿ 33-35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೀದರ್, ವಿಜಯಪುರ, ಧಾರವಾಡ, ಕೊಪ್ಪಳ, ರಾಯಚೂರು, ಹಾವೇರಿಯಲ್ಲಿ 33-35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಲಬುರಗಿ, ಬಾಗಲಕೋಟೆ ಮತ್ತು ಗದಗದಲ್ಲಿ 36-38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.