WEATHER | ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿ ಲಘು ಮಳೆಯಾಗಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ.

ಗುಡ್ಡಗಾಡು ಪ್ರದೇಶಗಳಲ್ಲಿ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಭಾಗದಲ್ಲಿ ಪ್ರತ್ಯೇಕ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!