WEATHER | ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ

ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದೆ. ಮೇ 12ರ ಬಳಿಕ ರಾಜ್ಯಾದ್ಯಂತ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ.

ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!