ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಹವಾಮಾನ ಮುನ್ಸೂಚನೆ ಪ್ರಕಾರ ಕೊಡಗು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇತರ ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ರಾಜ್ಯದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಸನ್ ಬರ್ನ್ ಕೂಡ ತೀವ್ರವಾಗಿರುತ್ತದೆ. ರಾಜಧಾನಿ ಬೆಂಗಳೂರಿನಲ್ಲಿ ಒಣಹವೆ ಮುಂದುವರಿಯಲಿದ್ದು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ.
ಸದ್ಯ ರಾಜ್ಯದಲ್ಲಿ ಎರಡ್ಮೂರು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏ. 1 ರಂದು ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 26 ರಿಂದ ಮಾರ್ಚ್ 30 ರವರೆಗೆ, ಶುಷ್ಕ ಹವಾಮಾನದೊಂದಿಗೆ ಗರಿಷ್ಠ ತಾಪಮಾನವು ಏರಿಳಿತಗೊಳ್ಳುತ್ತದೆ.