January15, 2026
Thursday, January 15, 2026
spot_img

WEATHER | ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 13ರವರೆಗೂ ಮಳೆ ಸಾಧ್ಯತೆ

ಕರ್ನಾಟಕದ ಬಹುತೇಕ ಕಡೆ ಮಳೆ ಪ್ರಮಾಣ ಕಡಿಮೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 13ರವರೆಗೂ ಮಳೆ ಮುಂದುವರೆಯಲಿದೆ.

ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Most Read

error: Content is protected !!