WEATHER | ರಾಜ್ಯಾದ್ಯಂತ ಮಳೆ ಸೂಚನೆ, ಮುಕ್ಕಾಲು ಭಾಗದಲ್ಲಿ ತಾಪಮಾನ ಏರಿಕೆ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಮುಖ್ಯವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮತ್ತೊಂದೆಡೆ, ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ ಮತ್ತು ಹಾವೇರಿ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗಲಿದೆ. . ಆದ್ದರಿಂದ, ಆಂತರಿಕ ಆರೆಂಜ್ ಅಲರ್ಟ್ ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!