ರಾಜ್ಯದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕೆಲವೆಡೆ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ತುಮಕೂರು ಮತ್ತು ರಾಮನಗರದಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಇತರ ಪ್ರದೇಶಗಳಲ್ಲಿ ಲಘು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿಮೀ ಗಾಳಿ ವೇಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.