ಕರ್ನಾಟಕದಾದ್ಯಂತ ಮುಂಗಾರಿನ ಅಬ್ಬರ ಸ್ವಲ್ಪ ತಗ್ಗಿದೆ. ಆಗಸ್ಟ್ 6ರ ನಂತರ ಮತ್ತೆ ಹೆಚ್ಚಳವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಬಳಿಕ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.